Breaking News

ಬೆಂಗಳೂರಲ್ಲಿ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಣ; ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮಹಿಳೆಯೊಬ್ಬರನ್ನು ಅಪಹರಿಸಿ, ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ, ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಚಂದ್ರಾಲೇಔಟ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ರೇಷ್ಮಾ ಭಾನು, ನಝತ್ ಹಾಗೂ ಸುಹೇಲ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ರೇಷ್ಮಾ ಭಾನು ಅವರಿಂದ ಸುಮಾರು ₹1 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಇದೇ ಪರಿಚಯ ಬಳಸಿಕೊಂಡು ಸಂತ್ರಸ್ತೆಯನ್ನು ಅಪಹರಿಸಿ, ಕುಂಬಳಗೋಡು ಸಮೀಪದ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸಂತ್ರಸ್ತೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *