ಮಡಂತ್ಯಾರು: ಗೇರುಕಟ್ಟೆ ಸಮೀಪದ ಸಂಬೋಳ್ಯದ 15 ವರ್ಷದ ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಬ್ರೈನ್ ಮ್ಯಾಪಿಂಗ್ ಪ್ರಕ್ರಿಯೆ ನಡೆದಿದೆ. ಸಹೋದರ ಸುದರ್ಶನ್, ಮಾವಂದಿರಾದ ರಾಧಾಕೃಷ್ಣ ಹಾಗೂ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರಿನ ಮಡಿವಾಳದ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಂತ್ ಜ.14ರಂದು ದೇವಸ್ಥಾನಕ್ಕೆ ತೆರಳಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಮುಂದುವರಿದರೂ ನಿಗೂಢತೆ ಬಗೆಹರಿಯದ ಹಿನ್ನೆಲೆಯಲ್ಲಿ ಪೊಲೀಸರು ಬ್ರೈನ್ ಮ್ಯಾಪಿಂಗ್ ಮೊರೆ ಹೋಗಿದ್ದಾರೆ. ಸುಮಂತ್ ಕುಟುಂಬದ ಐವರ ಪೈಕಿ ಮೂವರ ಬ್ರೈನ್ ಮ್ಯಾಪಿಂಗ್ ಪೂರ್ಣಗೊಂಡಿದ್ದು, ತಂದೆ ಸುಬ್ರಹ್ಮಣ್ಯ ನಾಯಕ್ ಹಾಗೂ ತಾಯಿ ರತ್ನಾವತಿ ಅವರನ್ನು ಪರೀಕ್ಷೆಗೆ ಒಳಪಡಿಸಿಲ್ಲ. ಇದೀಗ ಶಂಕಿತರನ್ನೂ ಬ್ರೈನ್ ಮ್ಯಾಪಿಂಗ್‌ಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದು, ಪ್ರಕರಣದ ಸತ್ಯಾಂಶ ಬಯಲಿಗೆಳೆಯುವ ನಿರೀಕ್ಷೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

