Breaking News

ಹಾಸನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಡಿದಾಟ – ಜಗಳ ಬಿಡಿಸಲು ಹೋದ ಜೈಲು ಸಿಬ್ಬಂದಿ ಮೇಲೂ ಭೀಕರ ಹಲ್ಲೆ!

ಹಾಸನ: ನಗರದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿ ಫೋನ್ ಕರೆ ಮಾಡುವ ವಿಚಾರಕ್ಕೆ ವಿಚಾರಣಾಧೀನ ಕೈದಿಗಳ ನಡುವೆ ಭೀಕರ ಮಾರಾಮಾರಿ ನಡೆದಿದೆ. ಜಗಳ ಬಿಡಿಸಲು ಮುಂದಾದ ಜೈಲು ಸಿಬ್ಬಂದಿಯ ಮೇಲೂ ಕೈದಿಗಳು ಹಲ್ಲೆ ನಡೆಸಿದ್ದು, ಮೂವರು ಸಿಬ್ಬಂದಿಗೆ ಗಾಯಗಳಾಗಿವೆ. ಫೋನ್ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮೋಹನಕುಮಾರ ಹಾಗೂ ರಂಗಸ್ವಾಮಿ ನಡುವೆ ಮೊದಲು ಕರೆ ಮಾಡುವ ವಿಚಾರಕ್ಕೆ ಜಗಳ ಶುರುವಾಗಿದೆ. ಬಳಿಕ ಒಂಭತ್ತು ಮಂದಿ ಕೈದಿಗಳು ಸೇರಿಕೊಂಡು ರಂಗಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ರಕ್ಷಿಸಲು ಬಂದ ಜೈಲು ಸಿಬ್ಬಂದಿ ಮೇಲೂ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡ ಜೈಲು ವೀಕ್ಷಕ ವೀರೇಶ್ ಸಂಗಮದ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಕೈದಿಗಳ ವಿರುದ್ಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *