Breaking News

ಬಡ್ಡಿ ಹಣ ಕೊಡಲಿಲ್ಲ ಅಂತ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ? ಮಿಸ್ಸಿಂಗ್ ಕಂಪ್ಲೇಂಟ್​​ನಿಂದ ಬಯಲಾಯ್ತು ಅಸಲಿ ಸತ್ಯ!

ಬೆಂಗಳೂರು: ಬಡ್ಡಿ ಹಣ ನೀಡದಿದ್ದಕ್ಕೆ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರೇಷ್ಮಾ ಬಾನು, ನಝತ್ ಹಾಗೂ ಸುಹೇಲ್ ಬಂಧಿತರು. ಸಂತ್ರಸ್ತೆ ಸುಮಾರು ಎರಡು ವರ್ಷಗಳ ಹಿಂದೆ ರೇಷ್ಮಾ ಬಳಿ ₹1 ಲಕ್ಷ ಹಾಗೂ ನಝತ್ ಬಳಿ ₹50 ಸಾವಿರ ಸಾಲ ಪಡೆದಿದ್ದರು ಎನ್ನಲಾಗಿದೆ. ಬಡ್ಡಿ ಹಾಗೂ ಕಂತು ಪಾವತಿಸದ ಹಿನ್ನೆಲೆಯಲ್ಲಿ ಆಕೆಯನ್ನು ಕೆಲಸದ ನೆಪದಲ್ಲಿ ಮನೆಗೆ ಕರೆಸಿ ಹಲ್ಲೆ ನಡೆಸಿ, ಬಳಿಕ ಆಟೋದಲ್ಲಿ ಅಪಹರಿಸಿ ಕುಂಬಳಗೋಡು ಸಮೀಪದ ಮನೆಗೆ ಕರೆದೊಯ್ದು ಕೂಡಿಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಿ ನಗ್ನಗೊಳಿಸಿ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ನಡುವೆ ಆಕೆಯ ತಾಯಿ ನೀಡಿದ್ದ ನಾಪತ್ತೆ ದೂರಿನ ಆಧಾರದಲ್ಲಿ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿದ್ದು, ಬಳಿಕ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *