ಹಾಸನ ಜಿಲ್ಲೆಯ ಬೇಲೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲು ತೆರಳಿದ್ದ ಪ್ರಕಾಶ್ ಎಂಬ ವ್ಯಕ್ತಿಯ ಮೇಲೆ ಮಹಿಳಾ ಕಾನ್‌ಸ್ಟೆಬಲ್ ಲಾವಣ್ಯ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ದಾಖಲಿಸುವಂತೆ ಒತ್ತಾಯಿಸಿದ ವೇಳೆ ಹಲ್ಲೆ ನಡೆಸಲಾಗಿದ್ದು, ತೀವ್ರ ಏಟಿನಿಂದ ಪ್ರಕಾಶ್ ಠಾಣೆಯಲ್ಲೇ ಕುಸಿದುಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲು ಪ್ರಕಾಶ್ ಆರ್‌ಟಿಐ ಮೂಲಕ ಪ್ರಯತ್ನಿಸಿದರೂ ಪೊಲೀಸರು ನೀಡಿರಲಿಲ್ಲ. ಬಳಿಕ ನ್ಯಾಯಾಲಯದ ಮೊರೆ ಹೋದ ನಂತರ ಕೋರ್ಟ್ ಆದೇಶದ ಮೇರೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಹಸ್ತಾಂತರಿಸಲಾಗಿದ್ದು, ಹಲ್ಲೆಯ ದೃಶ್ಯಗಳು ಸೆರೆಯಾಗಿರುವುದು ಬೆಳಕಿಗೆ ಬಂದಿದೆ. ತಮ್ಮ ಮೇಲೆ ಹಲ್ಲೆ ನಡೆಸಿದ ಮಹಿಳಾ ಪೇದೆ ಸೇರಿದಂತೆ ಕರ್ತವ್ಯಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪ್ರಕಾಶ್ ಆಗ್ರಹಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

