ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಲೇ ಮನೆಯಲ್ಲಿ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಸ್ಟಾಫ್ ನರ್ಸ್ ಜಿ.ಬಿ. ಸುನಿತಾ ಅವರನ್ನು ಆರೋಗ್ಯ ಇಲಾಖೆ ಅಮಾನತುಗೊಳಿಸಿದೆ. ಬೀಚಗಾನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಪೆರೇಸಂದ್ರದಲ್ಲಿನ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಅಕ್ರಮ ಕ್ಲಿನಿಕ್ ಕುರಿತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾದ ಬಳಿಕ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿತ್ತು. ಸುಮಾರು 15 ದಿನಗಳ ಬಳಿಕ ಜಿಲ್ಲಾ ಪಂಚಾಯಿತಿ ಸಿಇಒ ನವೀನ್ ಭಟ್ ಅವರ ಸೂಚನೆಯಂತೆ ಡಿಎಚ್‌ಒ ಡಾ. ಹೆಚ್.ಸಿ. ಚೇತನ್ ಅಮಾನತು ಆದೇಶ ಹೊರಡಿಸಿದ್ದಾರೆ. ನರ್ಸ್ ಕರ್ತವ್ಯಲೋಪ ಹಾಗೂ ನಿಯಮಬಾಹಿರ ವೈದ್ಯಕೀಯ ಚಿಕಿತ್ಸೆ ಆರೋಪದ ಕುರಿತು ಇಲಾಖಾ ತನಿಖೆಗೂ ಆದೇಶಿಸಲಾಗಿದೆ. ತನಿಖಾ ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

