ಹಲಗೂರು: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಯುವಕನೊಬ್ಬನ ಕುತ್ತಿಗೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಗುರುವಾರ ಸಂಜೆ ಹಾಡ್ಲಿ-ಮೇಗಳಪುರ ಸರ್ಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಕಸಬಾ ಹೋಬಳಿಯ ಲಿಂಗಾಣಪುರ ದೊಡ್ಡಿ ಗ್ರಾಮದ ಸ್ವಾಮಿ ಎಂದು ಗುರುತಿಸಲಾಗಿದೆ. ಶರತ್, ಮುತ್ತುರಾಜು, ರಾಜು ಸೇರಿದಂತೆ ಕೆಲವರು ಬೇಕರಿ ಮುಂಭಾಗ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆಸಿ, ಬಳಿಕ ಸ್ವಾಮಿ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಸ್ವಾಮಿ ಅವರನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

