Breaking News

ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ್ತು ಹಿಸುಕಿ ಕೊಲೆಯತ್ನ; ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃತ್ಯ

ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣದ ಐವರು ವಿಚಾರಣಾಧೀನ ಕೈದಿಗಳು ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಅಡ್ಡಿಪಡಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಸೆ.2ರಂದು ವಾರ್ಡನ್ ಮಂಜುನಾಥ್ ಹವೇಲಿ ಕರ್ತವ್ಯದಲ್ಲಿದ್ದಾಗ ಐವರು ಆರೋಪಿಗಳು ಅವರನ್ನು ಬಲವಂತವಾಗಿ ನಾಲ್ಕನೇ ಕೊಠಡಿಗೆ ಎಳೆದೊಯ್ದು ಮುಖ ಹಾಗೂ ಮೂಗಿಗೆ ಗುದ್ದಿದ್ದಾರೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೊಹಮದ್ ಮುಶಾಮೀರ್, ಅಬ್ದುಲ್ ಶಪ್ಪನ್, ಮೊಹ್ಮದ್ ರಿಜ್ವಾನ್, ನಿಯಾಜ್ ಹಾಗೂ ಕಲಂದರ್ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಜುನಾಥ್ ಹವೇಲಿ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *