Breaking News

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್‌ ಗಳು ಜಪ್ತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಜಾಜೂರು ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕಗಳನ್ನು ದಾಬಸ್‌ಪೇಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‌ಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟಕಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಶಿವಶಂಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ದಾಬಸ್‌ಪೇಟೆ ಸುತ್ತಮುತ್ತ ನಡೆಯುತ್ತಿದ್ದ ಅಕ್ರಮ ಕಲ್ಲುಗಣಿಗಾರಿಕೆ ಚಟುವಟಿಕೆಗಳಿಗೆ ಈ ಸ್ಫೋಟಕಗಳನ್ನು ಬಳಸಲು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಸ್ಫೋಟಕ ವಸ್ತುಗಳ ಕಾಯ್ದೆ ಹಾಗೂ ಬಿಎನ್‌ಎಸ್‌ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಫೋಟಕಗಳ ಮೂಲ, ಸಾಗಾಟದ ಉದ್ದೇಶ ಹಾಗೂ ಅಕ್ರಮ ಗಣಿಗಾರಿಕೆಯ ಸಂಪರ್ಕದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *