Breaking News

ಮಂಜೇಶ್ವರ: ಹೊಸಂಗಡಿಯಲ್ಲಿ ಕರ್ನಾಟಕ ಮೂಲದ ಕಾರ್ಮಿಕನ ಕೊಲೆ

ಮಂಜೇಶ್ವರ: ಕರ್ನಾಟಕ ಮೂಲದ ಕಾರ್ಮಿಕ ರಮೇಶ್ ಯಾನೆ ಸತೀಶ್ (38) ಎಂಬಾತನನ್ನು ತಲೆಗೆ ರುಬ್ಬುವ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಾಸರಗೋಡು ಜಿಲ್ಲೆಯ ಹೊಸಂಗಡಿ ಸಮೀಪದ ಅಂಗಡಿಪದವಿನಲ್ಲಿ ನಡೆದಿದೆ. ಹಳೆಯ ಮನೆಯ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ರಮೇಶ್ ಶವ ಪತ್ತೆಯಾಗಿದೆ. ಸ್ಥಳದಲ್ಲಿದ್ದ ರುಬ್ಬುವ ಕಲ್ಲಿನಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದು, ಅದರಿಂದಲೇ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆ ನಡೆದ ದಿನ ರಮೇಶ್‌ನನ್ನು ಮನೆಗೆ ಕರೆದುಕೊಂಡು ಬಂದಿದ್ದ ಕರ್ನಾಟಕ ಮೂಲದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಮಂಜೇಶ್ವರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *