Breaking News

ದೂರು ದಾಖಲಿಸಲು ವಿಳಂಬ ಆರೋಪ : ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಕಲಬುರಗಿ: ದೂರು ದಾಖಲಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರು ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನೆಲೋಗಿ ಪೊಲೀಸ್ ಠಾಣೆ ಎದುರು ನಡೆದಿದೆ. ಯಾತನೂರ ಗ್ರಾಮದ ರೇವುಬಾಯಿ ಭೀಮರಾಯ ತಳವಾರ (40) ಅಸ್ವಸ್ಥಗೊಂಡಿದ್ದು, ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ದೂರಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ರೇವುಬಾಯಿ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರು ಬೇರೆಯವರ ಪ್ರಭಾವಕ್ಕೆ ಒಳಗಾಗಿ ಬಡವರಿಗೆ ನ್ಯಾಯ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಠಾಣೆ ಎದುರು ಸಾರ್ವಜನಿಕರು ಹಾಗೂ ಸ್ಥಳೀಯ ಹೋರಾಟಗಾರರು ಜಮಾಯಿಸಿ ಪ್ರತಿಭಟನೆ ನಡೆಸಿದರು. ರೇವುಬಾಯಿ ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದ್ದು, ದೂರು ಸ್ವೀಕರಿಸುವಲ್ಲಿ ವಿಳಂಬದ ಆರೋಪದ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಆಗ್ರಹಿಸಲಾಗಿದೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *