Breaking News

ಸಾಂಬಾರ್ ವಿಚಾರಕ್ಕೆ ಅಕ್ಕ-ತಂಗಿ ನಡುವೆ ಜಗಳ, ಮನನೊಂದು ವಿದ್ಯಾರ್ಥಿನಿ ನೇಣಿಗೆ ಶರಣು!

ತುಮಕೂರು: ಮನೆಯಲ್ಲಿ ಸಾಂಬಾರು ಮಾಡುವ ವಿಚಾರಕ್ಕೆ ಅಕ್ಕ-ತಂಗಿಯ ನಡುವೆ ನಡೆದ ಸಣ್ಣ ಜಗಳದಿಂದ ಮನನೊಂದ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ತುಮಕೂರು ನಗರದ ಜಯನಗರದಲ್ಲಿ ನಡೆದಿದೆ. ಹುಲಿಗಮ್ಮ (16) ಮೃತ ಬಾಲಕಿ. ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹುಲಿಗಮ್ಮ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಮಧ್ಯಾಹ್ನ ಅಡುಗೆ ವಿಚಾರವಾಗಿ ಅಕ್ಕ-ತಂಗಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ಇದರಿಂದ ಮನನೊಂದ ಬಾಲಕಿ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ. ಕುಟುಂಬ ಮೂಲತಃ ರಾಯಚೂರು ಜಿಲ್ಲೆಯಾಗಿದ್ದು, ಜೀವನೋಪಾಯಕ್ಕಾಗಿ ತುಮಕೂರಿನ ಜಯನಗರದಲ್ಲಿ ವಾಸವಾಗಿತ್ತು. ಘಟನೆ ತಿಳಿಯುತ್ತಿದ್ದಂತೆ ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *