ಬೆಂಗಳೂರು: ಮ್ಯಾಟ್ರಿಮೋನಿಯಲ್ ಪೋರ್ಟಲ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬ ಬೆಂಗಳೂರಿನ ವೈದ್ಯೆಗೆ ಮದುವೆಯಾಗುವುದಾಗಿ ನಂಬಿಸಿ ಬರೋಬ್ಬರಿ ₹22.2 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಘಟನೆ ನಡೆದಿದೆ. ತಾನು ಜರ್ಮನಿಯ ಬರ್ಲಿನ್‌ನಲ್ಲಿ ನೆಲೆಸಿರುವ ನೇತ್ರ ತಜ್ಞ ಡಾ. ಗಣೇಶ್ ಬರ್ಮನ್ ಎಂದು ಪರಿಚಯಿಸಿಕೊಂಡಿದ್ದ ಆರೋಪಿ, ಭಾರತಕ್ಕೆ ಮರಳಿ ದೆಹಲಿಯಲ್ಲಿ ಆಸ್ಪತ್ರೆ ಆರಂಭಿಸುವುದಾಗಿ ವೈದ್ಯೆಗೆ ತಿಳಿಸಿದ್ದ. ಬಳಿಕ ತನ್ನ ಅಂತಾರಾಷ್ಟ್ರೀಯ ಬ್ಯಾಂಕ್ ಖಾತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿ, ಆಸ್ಪತ್ರೆ ಯೋಜನೆಗಾಗಿ ವಿವಿಧ ಏಜೆಂಟ್‌ಗಳ ಖಾತೆಗೆ ಹಣ ವರ್ಗಾಯಿಸುವಂತೆ ವೈದ್ಯೆಯನ್ನು ನಂಬಿಸಿದ್ದಾನೆ. ಆರೋಪಿಯ ಮಾತನ್ನು ನಂಬಿದ ವೈದ್ಯೆ ಜನವರಿ 9ರಿಂದ 24ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದಾರೆ. ತಮ್ಮ ಖಾತೆಯಲ್ಲಿ ಹಣದ ಕೊರತೆಯಾದಾಗ ಭಾವಮೈದುನನಿಂದಲೂ ಹಣ ಪಡೆದು ವರ್ಗಾಯಿಸಿದ್ದಾರೆ. ಒಟ್ಟು ₹22.2 ಲಕ್ಷಕ್ಕೂ ಅಧಿಕ ಹಣ ಪಡೆದ ಬಳಿಕವೂ ಆರೋಪಿ ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಅನುಮಾನಗೊಂಡ ವೈದ್ಯೆಗೆ ತಾವು ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ. ಈ ಕುರಿತು ಪೂರ್ವ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

