ಗದಗ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಕೋರರು ₹12 ಲಕ್ಷ ಸಾಲ ನೀಡುವ ನೆಪದಲ್ಲಿ ₹1.5 ಕೋಟಿ ಮೌಲ್ಯದ 12 ಪ್ಲಾಟ್‌ಗಳನ್ನು ಕಬಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುರೇಖಾ ಕಬಾಡಿ ಹಾಗೂ ಮಗಳು ಅಂಬಿಕಾ ಕಬಾಡಿ ಅವರು ತಲಾ ₹6 ಲಕ್ಷ ಸಾಲ ಪಡೆದಿದ್ದು, ₹7 ಲಕ್ಷಕ್ಕೂ ಹೆಚ್ಚು ಬಡ್ಡಿ ಪಾವತಿಸಿದ್ದಾರೆ ಎನ್ನಲಾಗಿದೆ. ಹಾಫ್ ರಿಜಿಸ್ಟ್ರೇಷನ್ ನೆಪದಲ್ಲಿ ಆಸ್ತಿಗಳನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದು, ನಕಲಿ ದಾಖಲೆಗಳ ಮೂಲಕ ₹4ರಿಂದ ₹5 ಕೋಟಿ ಮೌಲ್ಯದ 9,000 ಚದರ ಮೀಟರ್ ಆಸ್ತಿಯನ್ನೂ ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ತಾಯಿ-ಮಗಳು ಆರೋಪಿಸಿದ್ದಾರೆ. ಈ ಸಂಬಂಧ 2025ರ ಮಾರ್ಚ್ 15ರಂದು ಬೆಟಗೇರಿ ಠಾಣೆಯಲ್ಲಿ ಏಳು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಇದುವರೆಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ ಎಂದು ಸಂತ್ರಸ್ತರು ದೂರಿದ್ದಾರೆ. ಪ್ರಭಾವಿಗಳ ಒತ್ತಡದಿಂದ ನ್ಯಾಯ ಸಿಗುತ್ತಿಲ್ಲ ಎಂದು ಆರೋಪಿಸಿ, ಸರ್ಕಾರದಿಂದ ತಕ್ಷಣ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

