Breaking News

ಪುನುಗು ಬೆಕ್ಕಿನ ಅಕ್ರಮ ಸಾಗಣೆ – ಮೂವರ ಬಂಧನ!

ತುಮಕೂರು: ಕಾರಿನಲ್ಲಿ ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ತಿಪಟೂರು ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ. ಕೆ.ಬಿ. ಕ್ರಾಸ್ ಬಳಿಯ ಹಾಲುಗೋಣ ಗ್ರಾಮದ ಸಮೀಪ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು, ಪುನುಗು ಬೆಕ್ಕನ್ನು ರಕ್ಷಿಸಿದ್ದಾರೆ. ಬಂಧಿತರನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಅಶೋಕ್ (55), ರವಿ ಕುಮಾರ್ (40) ಹಾಗೂ ಚಿಕ್ಕನಾಯಕನಹಳ್ಳಿಯ ಪರೇಶ್ ಸ್ವಾಮಿ (52) ಎಂದು ಗುರುತಿಸಲಾಗಿದೆ. ವನ್ಯಜೀವಿಗಳ ಬೇಟೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದಾಗ, ಆರೋಪಿಗಳು ಪುನುಗು ಬೆಕ್ಕನ್ನು ಬೇಟೆಯಾಡಿ ಕಾರಿನಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪುನುಗು ಬೆಕ್ಕನ್ನು ಎಲ್ಲಿ ಬೇಟೆಯಾಡಲಾಗಿತ್ತು ಹಾಗೂ ಯಾರಿಗೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು ಎಂಬುದರ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *