ಬೆಳಗಾವಿ: ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಯುವಕರನ್ನು ಬೆಳಗಾವಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಕ್ಷಯಕುಮಾರ ಅಂಕಲಗಿ (20), ಆದರ್ಶ ಹಿರೇಮಠ (25) ಹಾಗೂ ಮಣಿಕಂಠ ಉಗರಖೋಡಾ (20) ಬಂಧಿತ ಆರೋಪಿಗಳು. ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅವರಿಂದ ಗಾಂಜಾ, ಬೈಕ್ ಹಾಗೂ ಮೊಬೈಲ್ ಸೇರಿದಂತೆ ಒಟ್ಟು ₹1.80 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳಿಗೆ ಸುಮಾರು 1 ಕೆಜಿ ಗಾಂಜಾ ಪೂರೈಕೆ ಮಾಡಿದ್ದಾನೆ ಎನ್ನಲಾದ ಮೈತಾಬ್ ಎಂಬಾತ ಪೊಲೀಸರ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

