ಕಾಸರಗೋಡು: ಹಣದ ವ್ಯವಹಾರದ ವಿಚಾರಕ್ಕೆ ನಡೆದ ಜಗಳದಲ್ಲಿ ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ ಆರೋಪಿಯನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ನಿವಾಸಿ ರಾಮ್ ನಾಯಕ್ ಅಲಿಯಾಸ್ ರಮೇಶ್ (31) ಬಂಧಿತ ಆರೋಪಿ. ಹೊಸಪೇಟೆ ಲಿಂಗನಾಯಕನಹಳ್ಳಿ ನಿವಾಸಿ ರಮೇಶ್ (38) ಅಂಗಡಿಪದವಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಸೆ.4ರಂದು ಸಂಜೆ ಸ್ನೇಹಿತರಾದ ಇಬ್ಬರೂ ಮನೆಯಲ್ಲಿ ಮದ್ಯಪಾನ ಮಾಡುತ್ತಿದ್ದ ವೇಳೆ ಹಣದ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ರಮೇಶ್ಗೆ ಇರಿದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಬಳಿಕ ಪರಾರಿಯಾಗಿದ್ದ ಆರೋಪಿ ಊರಿಗೆ ತೆರಳಲು ಯತ್ನಿಸುತ್ತಿದ್ದಾಗ ಮಂಗಳೂರಿನ ಪಡೀಲ್ನಲ್ಲಿ ಶನಿವಾರ ರಾತ್ರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಮೀಪದ ಮನೆಯವರು ನೀಡಿದ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

