Breaking News

ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆ ಕೊಲೆ ಆರೋಪ, ಅಪ್ರಾಪ್ತ ಸೇರಿ 5 ಮಂದಿ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಹಿರಿಯೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಗಲಾಟೆ ವೇಳೆ ಮಹಿಳೆ ತನ್ನ ಪುತ್ರನಿಗೆ ಕರೆ ಮಾಡಿದ್ದು, ಆರೋಪಿಯು ತನ್ನ ತಂದೆ ಹಾಗೂ ಚಿಕ್ಕಪ್ಪಂದಿರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದ ಎನ್ನಲಾಗಿದೆ. ಬಳಿಕ ಮಚ್ಚಿನಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಅಪ್ರಾಪ್ತ ಸೇರಿದಂತೆ ಆತನ ತಂದೆ ಹಾಗೂ ಚಿಕ್ಕಪ್ಪಂದಿರು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *