ಬೆಂಗಳೂರು: ಸಿಲಿಕಾನ್ ಸಿಟಿಯ ಇಂದಿರಾನಗರದಲ್ಲಿ ಮದ್ಯದ ಮತ್ತಿನಲ್ಲಿದ್ದ ಯುವಕ-ಯುವತಿ ನಡುರಸ್ತೆಯಲ್ಲೇ ಬೀದಿರಂಪಾಟ ನಡೆಸಿದ ಘಟನೆ ನಡೆದಿದೆ. ಇಂದಿರಾನಗರ ಮೆಟ್ರೋ ನಿಲ್ದಾಣದ ಬಳಿ ಕ್ಯಾಬ್ ಹತ್ತಿದ ಕೆಲವೇ ಕ್ಷಣಗಳಲ್ಲಿ ಇಬ್ಬರ ನಡುವೆ ಜಗಳ ಆರಂಭವಾಗಿದೆ. ವಾಗ್ವಾದ ತಾರಕಕ್ಕೇರಿದ ವೇಳೆ ಯುವಕ, ಯುವತಿಯನ್ನು ಕಾರಿನೊಳಗೆ ತಳ್ಳಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಘಟನೆ ಕಂಡ ಕ್ಯಾಬ್ ಚಾಲಕ ತಕ್ಷಣ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಹೊಯ್ಸಳ ವಾಹನ ಸ್ಥಳಕ್ಕೆ ತಲುಪುವಷ್ಟರಲ್ಲಿ ಯುವತಿ ಆಟೋ ಹತ್ತಿ ಸ್ಥಳದಿಂದ ತೆರಳಿದ್ದಾಳೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

