Breaking News

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ನಿಂದನೆ: ಆರೋಪಿ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪೊಲೀಸರು ವೇದಮೂರ್ತಿ ಎಂಬಾತನನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಹೆಬ್ಬಗೋಡಿ, ಜಯನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಆರೋಪಿ ಅಂಬೇಡ್ಕರ್ ಅವರ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದ್ದಲ್ಲದೆ, ಪರಿಶಿಷ್ಟ ಜಾತಿ-ಪಂಗಡ ಹಾಗೂ ಸಂವಿಧಾನದ ಮೀಸಲಾತಿ ಕುರಿತು ವ್ಯಂಗ್ಯವಾಗಿ ಹೇಳಿಕೆ ನೀಡಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಇದರಿಂದ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಸಂಘಟನೆಗಳು ದೂರಿನಲ್ಲಿ ತಿಳಿಸಿದ್ದಾರೆ. ಇಂತಹ ಹೇಳಿಕೆಗಳು ಜಾತಿ ಆಧಾರಿತ ದ್ವೇಷ, ವೈಮನಸ್ಸು ಮತ್ತು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘಟನೆಗಳು ಒತ್ತಾಯಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *