Breaking News

ಲಾಡ್ಜ್‌ನಲ್ಲಿ ತಂಗಿದ್ದ ಐವರು ಪೊಲೀಸರ ಮೇಲೆ ಹಲ್ಲೆಗೆ ಯತ್ನ

ಶಿವಮೊಗ್ಗ: ತಾಲೂಕಿನ ಚೋರಡಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ತಂಗಿದ್ದ ಐವರು, ತಪಾಸಣೆಗೆ ತೆರಳಿದ್ದ ಕುಂಸಿ ಠಾಣೆ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಸ್ಥಳೀಯ ವ್ಯಕ್ತಿಯ ಆಧಾರ್ ಕಾರ್ಡ್ ನೀಡಿ ವಾರದ ಹಿಂದೆ ಲಾಡ್ಜ್‌ನಲ್ಲಿ ಕೊಠಡಿ ಪಡೆದಿದ್ದ ಐವರು ಒಂದೇ ರೂಂನಲ್ಲಿ ತಂಗಿದ್ದರು.bಯುವಕರ ಅನುಮಾನಾಸ್ಪದ ವರ್ತನೆ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಪಾಸಣೆಗೆ ತೆರಳಿದ ಪೊಲೀಸರಿಗೆ ಸಹಕರಿಸದೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ ಬಳಿಕ ಐವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಪೊಲೀಸರು ಹಿಂಬಾಲಿಸಿದಾಗ ಆಯನೂರು ಬಳಿ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕಾರನ್ನು ವಶಕ್ಕೆ ಪಡೆದ ಪೊಲೀಸರು ಲಾಡ್ಜ್ ಕೊಠಡಿ ಪರಿಶೀಲಿಸಿದಾಗ ಚಾಕು ಹಾಗೂ ಗಾಂಜಾ ಪತ್ತೆಯಾಗಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಐವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *