Breaking News

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ರೇಪ್‌ ಮಾಡಿದ ಡಾಕ್ಟರ್! ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ʼಮೇಲ್

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಮಾಡಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರದ ಬಳಿಕ ವಿಡಿಯೋ ಮಾಡಿಕೊಂಡು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಕಳೆದೊಂದು ವರ್ಷದಿಂದ ಹಲವು ಬಾರಿ ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ಯುವರಾಜ್‌ ಮನೋಹರ್ ವಿರುದ್ಧ ಕೊಡಿಗೇಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿ ನೀಡಿರುವ ದೂರಿನ ಪ್ರಕಾರ, ಕಳೆದ ವರ್ಷ ಕಚೇರಿಯಲ್ಲಿ ಪೈಲ್ಸ್‌ ಸಮಸ್ಯೆ ಪರೀಕ್ಷಿಸುವ ನೆಪದಲ್ಲಿ ತನ್ನನ್ನು ಕರೆದುಕೊಂಡು ಹೋಗಿದ್ದ ವೈದ್ಯ, ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *