Breaking News

ತಿರುಪತಿ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಕಾರು ಪಲ್ಟಿ: ಒಂದೇ ಕುಟುಂಬದ ನಾಲ್ವರು ಸಾವು

ತಿರುಪತಿ ದರ್ಶನ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಕೆಜಿಎಫ್‌ನ ಬೇತಮಂಗಲ ಸಮೀಪದ ದೊಡ್ಡಕಾರಿ ಬಳಿ ನಡೆದಿದೆ. ಮೃತರನ್ನು ಶಾರದಾಬಾಯಿ (70), ದೀಕ್ಷಿತಾ (20), ದೇವೇಂದ್ರ (45) ಹಾಗೂ ವಿಷ್ಣು (12) ಎಂದು ಗುರುತಿಸಲಾಗಿದೆ. ಎರಡು ಕುಟುಂಬಗಳ ಎಂಟು ಮಂದಿ ತಿರುಪತಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಬೆಳಗ್ಗೆ 6.50ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನಿಗೆ ತೂಕಡಿಕೆ ಬಂದಿದ್ದರಿಂದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *