Breaking News

ಪತ್ನಿಯನ್ನು ಹತ್ಯೆ ಮಾಡಿ ಬೆರಳುಗಳನ್ನು ಕತ್ತರಿಸಿ, ರುಂಡ ಫ್ರಿಡ್ಜ್‌ನಲ್ಲಿಟ್ಟ ಪಾಪಿ ಪತಿ; ಮನೆಯೊಳಗೆ ಹೋದವರಿಗೆ ಕಾದಿತ್ತು ಶಾಕ್‌!

ಅಸ್ಸಾಂನ ಗುವಾಹಟಿಯಲ್ಲಿ ಮದುವೆಯಾದ ಕೆಲವೇ ತಿಂಗಳಲ್ಲಿ 25 ವರ್ಷದ ರಿಯಾ ತಾಲ್ಲೂಕುದಾರ್ ಅಪಾರ್ಟ್‌ಮೆಂಟ್‌ನಲ್ಲಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೆರೆಹೊರೆಯವರ ದೂರಿನ ಮೇರೆಗೆ ಬೀಗ ಮುರಿದು ಪರಿಶೀಲಿಸಿದ ಪೊಲೀಸರಿಗೆ ದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದ್ದು, ಬೆರಳುಗಳು ಕತ್ತರಿಸಲ್ಪಟ್ಟಿದ್ದವು. ಬಳಿಕ ಫ್ರಿಡ್ಜ್‌ನಲ್ಲಿದ್ದ ಪಾಲಿಥಿನ್ ಚೀಲದಲ್ಲಿ ಆಕೆಯ ತಲೆ ಪತ್ತೆಯಾಗಿದೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಪತಿ ರಾಮಾನುಜನ್ ಗೋಸ್ವಾಮಿ ಭಾನುವಾರ ರಾತ್ರಿ ಪೊಲೀಸರಿಗೆ ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಂಪತಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿತ್ತೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *