Breaking News

ರಾಜ್ಯಾಧ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ!

ಬೆಂಗಳೂರು: ವೈದ್ಯಕೀಯ ಪದವಿ ಹಾಗೂ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುತ್ತಿದ್ದ ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಕಠಿಣ ಕಾರ್ಯಾಚರಣೆ ನಡೆಸಿದೆ. 2024ರಿಂದ ರಾಜ್ಯಾದ್ಯಂತ 583ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪತ್ತೆಯಾದವರಲ್ಲಿ ಹಲವರು ಲ್ಯಾಬ್ ಅಸಿಸ್ಟೆಂಟ್‌, ನರ್ಸ್‌, ಕಂಪೌಂಡರ್‌ ಹಾಗೂ ಕ್ಲಿನಿಕ್ ಸಹಾಯಕರಾಗಿ ಕೆಲಸ ಮಾಡಿದ್ದವರು ಎನ್ನಲಾಗಿದೆ. ಕಲಬುರಗಿ, ರಾಯಚೂರು, ಧಾರವಾಡ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಕೆಲವರು ‘ಮೊಬೈಲ್ ಕ್ಲಿನಿಕ್’ ಮೂಲಕ ಚಿಕಿತ್ಸೆ ನೀಡುತ್ತಿರುವುದು ಪತ್ತೆಯಾಗಿದೆ. ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ, ಪೊಲೀಸ್ ಹಾಗೂ ಔಷಧ ಆಡಳಿತ ಇಲಾಖೆಗಳನ್ನೊಳಗೊಂಡ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಮುನ್ನ ಅವರ ವೈದ್ಯಕೀಯ ಅರ್ಹತೆ ಹಾಗೂ KMC ನೋಂದಣಿ ಸಂಖ್ಯೆಯನ್ನು ಪರಿಶೀಲಿಸುವಂತೆ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *