Breaking News

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಯುವಕ: ಮುಂದೆ ನಿಂತು ಇಬ್ಬರಿಗೂ ಮದುವೆ ಮಾಡಿಸಿದ ಪೊಲೀಸರು

ಹಾಸನ ಜಿಲ್ಲೆಯ ಆಲೂರು ಪಟ್ಟಣದಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ಮಗು ಜನಿಸಿದ ಬಳಿಕ ಕೈಕೊಟ್ಟ ಘಟನೆ ನಡೆದಿದೆ. ಬೀರಕನಹಳ್ಳಿ ಗ್ರಾಮದ ರಾಜು ಹಾಗೂ ನಿಲುವಾಗಿಲು ಗ್ರಾಮದ ಅನ್ನಪೂರ್ಣ ಪರಸ್ಪರ ಪ್ರೀತಿಸುತ್ತಿದ್ದು, ಒಂದು ವರ್ಷ ಒಟ್ಟಿಗಿದ್ದರು. ಮದುವೆಯಾಗುವುದಾಗಿ ರಾಜು ಭರವಸೆ ನೀಡಿದ್ದ ಎನ್ನಲಾಗಿದೆ. ಅನ್ನಪೂರ್ಣ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ ರಾಜು ಮದುವೆಯಾಗದೆ ಪರಾರಿಯಾಗಿದ್ದ. ಮನನೊಂದ ಅನ್ನಪೂರ್ಣ ಪೊಲೀಸರಿಗೆ ದೂರು ನೀಡಿದ್ದು, ತಲೆಮರೆಸಿಕೊಂಡಿದ್ದ ರಾಜುವನ್ನು ಪೊಲೀಸರು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದಾರೆ. ಬಳಿಕ ಪೊಲೀಸರು ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ರಾಜುವಿಗೆ ಬುದ್ಧಿವಾದ ಹೇಳಿದ್ದು, ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಸ್ಥಳೀಯ ಅಂಬೇಡ್ಕರ್ ಪ್ರತಿಮೆ ಎದುರು ರಾಜು-ಅನ್ನಪೂರ್ಣ ವಿವಾಹ ನೆರವೇರಿದ್ದು, ಪೊಲೀಸರ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *