ಶಿವಮೊಗ್ಗದ ಸೀಗೆಹಟ್ಟಿ ನಿವಾಸಿ, ರೌಡಿಶೀಟರ್ ಕುಳ್ಳಿ ಕಿರಣ್ (32) ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದೆ. ರಾಮಿನಕೊಪ್ಪದ ಬಳಿ ಇಸ್ಪೀಟ್ ಜೂಜಾಟ ನಡೆಯುತ್ತಿದ್ದ ವೇಳೆ 2–3 ಮಂದಿ ಏಕಾಏಕಿ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಿರಣ್‌ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಖಾಸಗಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಗಲಾಟೆಯೇ ಕೊಲೆಗೆ ಕಾರಣವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹಳೆಯ ದ್ವೇಷವೇ ಅಥವಾ ಜೂಜಾಟದ ವೇಳೆ ನಡೆದ ಜಗಳವೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ರೌಡಿಶೀಟರ್ ಹತ್ಯೆಯಿಂದ ಸೀಗೆಹಟ್ಟಿ ಭಾಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

