ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದೆ. ಮೈನು, ಜುನೈದ್, ಇರ್ಫಾನ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮೊಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ದಾಳಿ ನಡೆಸಿದೆ ಎನ್ನಲಾಗಿದೆ. ಹಳೆಯ ವೈಷಮ್ಯ ಹಾಗೂ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

