Breaking News

ಹೊಸಂಗಡಿ ಕೊಲೆ: ಮಂಗಳೂರಲ್ಲಿ ಆರೋಪಿ ಸೆರೆ

ಮಂಜೇಶ್ವರದ ಅಂಗಡಿಪದವಿನಲ್ಲಿ ಬಾಡಿಗೆ ಮನೆಯಲ್ಲಿ ಕೂಲಿ ಕಾರ್ಮಿಕ ರಮೇಶ್ (38) ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಪರಪ್ಪನಹಳ್ಳಿ ಮೂಲದ ರಾಮ್ ನಾಯ್ಕ್ ಅಲಿಯಾಸ್ ರಮೇಶ್ (31) ಬಂಧಿತ ಆರೋಪಿ. ರಮೇಶ್ ಹಾಗೂ ರಾಮ್ ನಾಯ್ಕ್ ಸ್ನೇಹಿತರಾಗಿದ್ದು, ಶುಕ್ರವಾರ ಸಂಜೆ ಇಬ್ಬರೂ ಮದ್ಯಪಾನ ಮಾಡಿದ್ದರು. ಈ ವೇಳೆ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ರಾಮ್ ನಾಯ್ಕ್ ಚೂರಿಯಿಂದ ಇರಿದು ರಮೇಶ್‌ನನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಆರೋಪಿ ಮಂಗಳೂರು ಪಡೀಲ್‌ಗೆ ತೆರಳಿ, ಅಲ್ಲಿಂದ ತನ್ನ ಊರಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಘಟನೆ ಕುರಿತು ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಡುಗೆಮನೆಯಲ್ಲಿ ರಮೇಶ್ ಕೊಲೆಯಾದ ಸ್ಥಿತಿಯಲ್ಲಿ ಇರುವುದನ್ನು ಮನೆಯ ಮತ್ತೊಬ್ಬ ನಿವಾಸಿ ಕೃಷ್ಣಪ್ಪ ಮೊದಲು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್‌ಸ್ಪೆಕ್ಟರ್ ಎಂ.ವಿ. ವಿಷ್ಣು ಪ್ರಸಾದ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *