Breaking News

ರಾತ್ರಿ ಮಲಗಿದ್ದವಳು ಬೆಳಗ್ಗೆ ಹೆಣವಾಗಿ ಪತ್ತೆ! ಗಂಡನಿಲ್ಲದ ಮಹಿಳೆಯ ಸಂಗ ಮಾಡಿದವನೇ ಮುಗಿಸಿಬಿಟ್ನಾ?

ಕಲಬುರಗಿ: ಗಂಡ ಸಾವನ್ನಪ್ಪಿ ಎಂಟು ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ನಾಗಮ್ಮ ಎಂಬ ಮಹಿಳೆ ಭೀಕರವಾಗಿ ಕೊಲೆಯಾಗಿರುವ ಘಟನೆ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ. ಅರೆನಗ್ನ ಸ್ಥಿತಿಯಲ್ಲಿ ಮಂಚದ ಮೇಲೆ ಆಕೆಯ ಮೃತದೇಹ ಪತ್ತೆಯಾಗಿದೆ. ಅದೇ ಗ್ರಾಮದ ರಾಜಪ್ಪ ಎಂಬಾತ ಆಗಾಗ್ಗೆ ನಾಗಮ್ಮ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಸಂಬಂಧವಿತ್ತು ಎನ್ನಲಾಗಿದ್ದು, ಆತ ನಾಗಮ್ಮಗೆ ಆಗಾಗ್ಗೆ ಹಲ್ಲೆ ಮಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೀಗಾಗಿ ಕೊಲೆಯ ಹಿಂದೆ ರಾಜಪ್ಪನ ಕೈವಾಡವಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ನಾಗಮ್ಮ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ರಾಜಪ್ಪ ಊರು ಬಿಟ್ಟು ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೊಲೆಗೆ ನಿಖರ ಕಾರಣ ತನಿಖೆಯಿಂದ ತಿಳಿಯಬೇಕಿದೆ.

Share News

About BigTv News

Check Also

ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ, ಯುವಕನ ಶವ ಪತ್ತೆ

ಕಲಬುರಗಿ: ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದ ಗುಡ್ಡದಲ್ಲಿ ಯುವಕ ಮತ್ತು ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು …

Leave a Reply

Your email address will not be published. Required fields are marked *