ವಿಜಯಪುರ: 2025-26ನೇ ಸಾಲಿನಲ್ಲಿ 143 ಶಾಲೆಗಳನ್ನು ಆರಂಭಿಸಲು ನಿಯಮಬಾಹಿರವಾಗಿ ಅನುಮತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಪ್ರಭಾರ ಡಿಡಿಪಿಐ ಟಿ.ಎಸ್. ಕೊಲ್ಹಾರ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಪ್ರಸ್ತುತ ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಲ್ಹಾರ ವಿರುದ್ಧ ಧಾರವಾಡ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ವರದಿ ಸಲ್ಲಿಸಿದ್ದರು. ಈ ವರದಿ ಆಧರಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಅಮಾನತು ಆದೇಶ ಹೊರಡಿಸಿದ್ದಾರೆ. ನಿಯಮಬಾಹಿರವಾಗಿ ಶಾಲೆಗಳಿಗೆ ಅನುಮತಿ ನೀಡಿರುವ ಆರೋಪದ ಕುರಿತು ಇಲಾಖೆ ತನಿಖೆ ಮುಂದುವರಿಯುವ ಸಾಧ್ಯತೆಯಿದ್ದು, ಪ್ರಕರಣದಲ್ಲಿ ಅಧಿಕಾರಿಯ ಹೊಣೆಗಾರಿಕೆ ಕುರಿತು ಮತ್ತಷ್ಟು ಪರಿಶೀಲನೆ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

