Breaking News

ಗಂಡನನ್ನು ಬಿಟ್ಟು ಬಂದವಳ ಅನುಮಾನಾಸ್ಪದ ಸಾವು, ಕೊಂದು ನೇಣು ಹಾಕಿದ್ನಾ ಪ್ರಿಯಕರ?

ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ಚೈತ್ರಾ ಎಂಬ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗಂಡನನ್ನು ತೊರೆದು 10 ಮತ್ತು 12 ವರ್ಷದ ಇಬ್ಬರು ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಚೈತ್ರಾಗೆ ಕೋಲಾರ ಮೂಲದ ಶಬ್ಬೀರ್ ಎಂಬಾತನೊಂದಿಗೆ ಪರಿಚಯವಿತ್ತು ಎನ್ನಲಾಗಿದೆ. ಚೈತ್ರಾ ಹಾಗೂ ಶಬ್ಬೀರ್ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಹಲ್ಲೆ ನಡೆಸಿ ಬಳಿಕ ನೇಣು ಬಿಗಿದು ಕೊಲೆ ಮಾಡಲಾಗಿದೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಬಳಿಕ ಶಬ್ಬೀರ್ ಸ್ಥಳದಿಂದ ಪರಾರಿಯಾಗಿದ್ದು, ಚೈತ್ರಾ ಬಳಿಯಿದ್ದ ಮೊಬೈಲ್‌ನ್ನೂ ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದು ನಂದಿಗಿರಿಧಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರಾರಿಯಾಗಿರುವ ಶಬ್ಬೀರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣದ ನಿಖರ ಕಾರಣ ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *