ಪಾಂಡವಪುರದ ಪ್ರಕಾಶ ಬಿನ್ ಮುದ್ದೇಗೌಡ ಎಂಬಾತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ನಗರದ 2ನೇ ತ್ವರಿತಗತಿ ನ್ಯಾಯಾಲಯ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿದೆ. 2015ರಲ್ಲಿ ಕೆ.ಆರ್.ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಯ ಬಾಲಕಿಯನ್ನು ಹಣ ನೀಡುವುದಾಗಿ ಪುಸಲಾಯಿಸಿ ಶಾಲಾ ಕೊಠಡಿಗೆ ಕರೆದೊಯ್ದು ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಬಳಿಕ ಬಾಲಕಿಯ ತಲೆಯನ್ನು ನೆಲಕ್ಕೆ ಜೋರಾಗಿ ಅಪ್ಪಳಿಸಿ, ಕುತ್ತಿಗೆಗೆ ದಾರ ಬಿಗಿದು ಕೊಲೆ ಮಾಡಿದ್ದ. ಪ್ರಕರಣದ ತನಿಖೆ ನಡೆಸಿದ ಇನ್‌ಸ್ಪೆಕ್ಟರ್ ರಾಜೇಂದ್ರ ಹಾಗೂ ಡಿ.ಯೋಗೇಶ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ. ದಿಲೀಪ್ ಕುಮಾರ್ ಅವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಅಭಿಯೋಜನೆ ಪರ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

