ಬೆಂಗಳೂರು ಗ್ರಾಮಾಂತರದ ನೆಲಮಂಗಲ ಸಮೀಪದ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶುವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟುಹೋದ ಅಮಾನವೀಯ ಘಟನೆ ನಡೆದಿದೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಮಂಜುನಾಥ್ ಅವರಿಗೆ ಹಳ್ಳದ ಪಕ್ಕದಲ್ಲಿ ಮಗುವಿನ ಅಳುವಿನ ಸದ್ದು ಕೇಳಿಸಿದ್ದು, ಹತ್ತಿರ ಹೋಗಿ ನೋಡಿದಾಗ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಶಿಶು ಪತ್ತೆಯಾಗಿದೆ. ಮಗು ಆಗತಾನೇ ಜನಿಸಿರುವಂತೆ ಕಂಡುಬಂದಿದ್ದು, ದೇಹದ ಮೇಲಿನ ರಕ್ತದ ಕಲೆಗಳು ಕೂಡ ಆರಿರಲಿಲ್ಲ. ಮಂಜುನಾಥ್ ಹಾಗೂ ಸ್ನೇಹಿತರು ತಕ್ಷಣ ಮಗುವನ್ನು ರಾಜಾನುಕುಂಟೆ ಠಾಣೆಗೆ ಕರೆದೊಯ್ದಿದ್ದು, ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಮಗು ಆರೋಗ್ಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮಗುವಿನ ಪೋಷಕರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಅಪರಿಚಿತರು ಆಟೋದಲ್ಲಿ ಬಂದು ಮಗುವನ್ನು ಬಿಟ್ಟುಹೋಗಿರುವ ಮಾಹಿತಿ ಲಭ್ಯವಾಗಿದ್ದು, ಹೆಣ್ಣು ಮಗು ಎಂಬ ಕಾರಣಕ್ಕಾಗಿಯೇ ತ್ಯಜಿಸಲಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

