ಬೆಂಗಳೂರು: ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವೈದ್ಯ ಹಾಗೂ ಸೆಂಟರ್ ಮಾಲೀಕ ಯುವರಾಜ್ ಮನೋಹರ್ ವಿರುದ್ಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ, ಬೆದರಿಕೆ ಹಾಗೂ ಎಸ್‌ಸಿ-ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 2025ರ ಡಿಸೆಂಬರ್‌ನಲ್ಲಿ ಫೈಲ್ ಹುಡುಕುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಪೆಪ್ಪರ್ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದು, ಕೃತ್ಯವನ್ನು ವಿಡಿಯೋ ಮಾಡಿಕೊಂಡು ಬೆದರಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಬಳಿಕ ಬಾಡಿಗೆ ಮನೆ ಮಾಡಿಕೊಟ್ಟು ನಿರಂತರವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಜಾತಿಯ ಬಗ್ಗೆ ತಿಳಿದು ಅವಾಚ್ಯವಾಗಿ ನಿಂದಿಸಿ ಕೆಲಸದಿಂದ ವಜಾ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಎಸ್‌ಸಿ-ಎಸ್‌ಟಿ ಕಾಯ್ದೆ ಅನ್ವಯವಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

