Breaking News

ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಶವ ಎಸೆದಿದ್ದ ಪ್ರಿಯಕರ*

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದ ಬಳಿ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದ ಅನ್ನಪೂರ್ಣಾ ಸಿದ್ದಪ್ಪ ಒಡಚನ್ನವರ (34) ಎಂಬ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಮ್ಲಾಪೂರ ಗ್ರಾಮದ ದಿಲೀಪ್ ಗಡ್ಕರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣಾ ಹಾಗೂ ದಿಲೀಪ್ ನಡುವೆ ಸಂಬಂಧವಿತ್ತು ಎನ್ನಲಾಗಿದ್ದು, ತನಿಖೆ ವೇಳೆ ದಿಲೀಪ್‌ ಮೇಲೆ ಪೊಲೀಸರಿಗೆ ಅನುಮಾನ ಮೂಡಿತ್ತು. ವಿಚಾರಣೆ ವೇಳೆ ಅನ್ನಪೂರ್ಣಾಳನ್ನು ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಶವ ಎಸೆದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ತೆಗೆದುಕೊಂಡು ಬೈಕ್‌ನಲ್ಲಿ ಇಟ್ಟಿರುವುದಾಗಿಯೂ ಮಾಹಿತಿ ನೀಡಿದ್ದಾನೆ. ಆರೋಪಿಯ ಮಾಹಿತಿ ಆಧರಿಸಿ ಪೊಲೀಸರು ಕಬ್ಬಿನ ಗದ್ದೆಯಲ್ಲಿ ಶೋಧ ನಡೆಸಿದಾಗ ತಲೆಬುರುಡೆ, ಮೂಳೆಗಳು, ಸೀರೆ ಹಾಗೂ ಚಪ್ಪಲಿ ಪತ್ತೆಯಾಗಿವೆ. ಕೊಲೆಗೆ ನಿಖರ ಕಾರಣವೇನು ಹಾಗೂ ಚಿನ್ನಾಭರಣಕ್ಕಾಗಿ ಕೊಲೆ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ವಯಸ್ಕ ಬಾಲಕಿ ಮೇಲಿನ ದೌರ್ಜನ್ಯ ಕೇಸ್: ಗ್ರಾಮದಲ್ಲಿ ಉದ್ವಿಗ್ನ ವಾತಾವರಣ, ಆರೋಪಿ ಮನೆ ಮೇಲೆ ದಾಳಿ

ಮುಂಡಗೋಡ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 65 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *