Breaking News

ಹುಲಿ, ಚಿರತೆ ಉಗುರು, ಕಾಡೆಮ್ಮೆ ಕೊಂಬು ಸೇರಿ ವನ್ಯಜೀವಿ ಉತ್ಪನ್ನ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ವನ್ಯಜೀವಿ ಉತ್ಪನ್ನಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಶಂಕರ ಸಿದ್ದಿ ಹಾಗೂ ನರಸಿಂಹ ಸಿದ್ದಿ ಬಂಧಿತ ಆರೋಪಿಗಳು. ಆರೋಪಿಗಳಿಂದ 15.748 ಕೆಜಿ ಪ್ಯಾಂಗೋಲಿನ್ ಚಿಪ್ಪುಗಳು, ಎರಡು ಕಾಡೆಮ್ಮೆ ಕೊಂಬುಗಳು, ಎಂಟು ಹುಲಿ ಉಗುರುಗಳು, 12 ಚಿರತೆ ಉಗುರುಗಳು, ಎರಡು ಹುಲಿ ಹಲ್ಲುಗಳು, ಮೂರು ಚಿರತೆ ಹಲ್ಲುಗಳು, ಆರು ಕಾಡುಹಂದಿ ಹಲ್ಲುಗಳು ಸೇರಿದಂತೆ ಒಂದು ಬೈಕ್ ಮತ್ತು ಒಂದು ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇನ್ನೂ ಕೆಲವರು ತಲೆಮರೆಸಿಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಅವರ ಬಂಧನಕ್ಕೆ ಅರಣ್ಯ ಇಲಾಖೆ ಬಲೆ ಬೀಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *