Breaking News

ವೈದ್ಯಕೀಯ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್: ರಾಯಚೂರಿನಲ್ಲಿ ಮೂವರು ಖತರ್ನಾಕ್ ಸುಲಿಗೆಕೋರರ ಬಂಧನ!

ರಾಯಚೂರು: ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಫೋಟೋ, ವಿಡಿಯೋ ತೆಗೆದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರ ಗ್ಯಾಂಗ್‌ ಅನ್ನು ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಡಾಬಾಗೆ ಸ್ನೇಹಿತೆಯೊಂದಿಗೆ ತೆರಳಿದ್ದ ಮೆಡಿಕಲ್ ವಿದ್ಯಾರ್ಥಿಯನ್ನು ಹಿಂಬಾಲಿಸಿದ್ದ ಆರೋಪಿಗಳು, ಫೋಟೋ-ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ₹30 ಸಾವಿರ ನಗದು ಪಡೆದಿದ್ದರು. ಬಳಿಕ ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದರು. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆರೋಪಿಗಳು ಕೇವಲ ನಗದು ರೂಪದಲ್ಲೇ ಹಣ ಪಡೆಯುತ್ತಿದ್ದರು. ರಾತ್ರಿ ವೇಳೆ ವಿದ್ಯಾರ್ಥಿಗಳು ಹಾಗೂ ಜೋಡಿಗಳನ್ನು ಬೆದರಿಸುತ್ತಿದ್ದ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *