Breaking News

ಬೆಂಗಳೂರು : ಪತ್ನಿಕೊಂದು ಆತ್ಮಹತ್ಯಗೆ ಶರಣಾದ ಆಟೋ ಚಾಲಕ

ಬೆಂಗಳೂರು, ಸೆ. 9: ಪತ್ನಿಯನ್ನು ಕೊಲೆ ಮಾಡಿದ ಆಟೋ ಚಾಲಕನೊಬ್ಬ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್‌ಎಎಲ್‌ ಪೊಲೀಸ್ ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ಶ್ರುತಿ (35) ಅವರನ್ನು ಕೊಲೆ ಮಾಡಿದ ಪತಿ ರಾಘವೇಂದ್ರ (38) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆ ಮೂಲದ ಶ್ರುತಿ ಹಾಗೂ ರಾಘವೇಂದ್ರ ಅವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮಕ್ಕಳು ದಾವಣಗೆರೆಯಲ್ಲಿರುವ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದು, ದಂಪತಿ ಇಬ್ಬರೇ ವಿಭೂತಿಪುರದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ನಿನ್ನೆ ರಾತ್ರಿ ಜಗಳ ಉಂಟಾದ ವೇಳೆ ರಾಘವೇಂದ್ರ ಬಿಯರ್ ಬಾಟಲಿಯಿಂದ ಶ್ರುತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಬೆಡ್‌ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಮನೆಯ ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಹೆಚ್‌ಎಎಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *