Breaking News

ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಮೃತ್ಯು!

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಬ್ಬಿಣದ ಕಂಬಗಳು ಬಸ್ಸಿನೊಳಗೆ ನುಗ್ಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಲವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *