Breaking News

ಕಾಸು ಬಿಚ್ಚಿದ್ರೆ ಮಾತ್ರ ಚಿಕಿತ್ಸೆ – ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯನ ಲಂಚಾವತಾರ

ಬೆಂಗಳೂರು ದಕ್ಷಿಣ: ರಾಮನಗರ ಸರ್ಕಾರಿ ಜಿಲ್ಲಾಸ್ಪತ್ರೆಯ ಯುರಾಲಜಿ ವಿಭಾಗದ ವೈದ್ಯ ಡಾ. ವಿಶ್ವನಾಥ್ ಆರ್. ವಿರುದ್ಧ ಬಡ ರೋಗಿಗಳಿಂದ ಲಂಚ ಪಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಮೂತ್ರಪಿಂಡದ ಕಲ್ಲು ಶಸ್ತ್ರಚಿಕಿತ್ಸೆಗೆ ಬರುವ ರೋಗಿಗಳಿಂದ ತಲಾ ₹30 ಸಾವಿರ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎನ್ನಲಾಗಿದೆ. ಹಣ ನೀಡದವರಿಗೆ ಚಿಕಿತ್ಸೆ ನೀಡದೆ ವಾಪಸ್ ಕಳುಹಿಸುತ್ತಿದ್ದಾರೆ ಎಂಬ ಆರೋಪವೂ ಇದೆ. ಈ ಹಿಂದೆ ಲೋಕಾಯುಕ್ತ ಹಾಗೂ ಆರೋಗ್ಯ ಇಲಾಖೆಯ ಮೇಲಾಧಿಕಾರಿಗಳು ಎಚ್ಚರಿಕೆ ನೀಡಿದ್ದರೂ ಲಂಚದ ದಂಧೆ ನಿಂತಿಲ್ಲ ಎನ್ನಲಾಗಿದೆ. ಇತ್ತೀಚೆಗೆ ರಂಗೇಗೌಡ ಎಂಬ ರೋಗಿಯಿಂದ ಕೇಳಿದಷ್ಟು ಹಣ ನೀಡದ ಕಾರಣ, ಶಸ್ತ್ರಚಿಕಿತ್ಸೆಯ ಬಳಿಕ ರಕ್ತಸ್ರಾವವಾಗುತ್ತಿದ್ದರೂ ಬ್ಯಾಂಡೇಜ್ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಲೀಲಾವತಿ ಎಂಬ ರೋಗಿಯಿಂದ ₹3 ಸಾವಿರ ಮುಂಗಡ ಪಡೆದರೂ ಬಾಕಿ ಹಣ ನೀಡಿಲ್ಲ ಎಂಬ ಕಾರಣಕ್ಕೆ ಗಂಟೆಗಟ್ಟಲೆ ಆಪರೇಷನ್ ಥಿಯೇಟರ್‌ನಲ್ಲಿ ಕೂರಿಸಿ ಚಿಕಿತ್ಸೆ ನೀಡದೆ ಕಳುಹಿಸಿದ್ದಾರೆ ಎನ್ನಲಾಗಿದೆ. ಘಟನೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *