Breaking News

ಅಪ್ರಾಪ್ತೆಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ಮಾನ್ಯವಲ್ಲ: ಪೋಕ್ಸೋ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆದಿದೆ ಎಂಬ ಕಾರಣಕ್ಕೆ ಪೋಕ್ಸೋ ಪ್ರಕರಣದಿಂದ ಆರೋಪಿಗೆ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯ ಸಮ್ಮತಿ ಕಾನೂನಿನ ದೃಷ್ಟಿಯಲ್ಲಿ ಮಾನ್ಯವಲ್ಲ ಎಂದು ತಿಳಿಸಿ, ಆರೋಪಿಯನ್ನು ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿದೆ. ಮಂಡ್ಯ ಜಿಲ್ಲೆಯ ಪ್ರಕರಣದಲ್ಲಿ ಘಟನೆ ನಡೆದಾಗ ಬಾಲಕಿಗೆ 16 ವರ್ಷ ವಯಸ್ಸಾಗಿತ್ತು ಎಂಬುದು ಜನನ ಪ್ರಮಾಣಪತ್ರ ಹಾಗೂ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಿಂದ ದೃಢಪಟ್ಟಿತ್ತು. ಅಲ್ಲದೆ, ಡಿಎನ್‌ಎ ಪರೀಕ್ಷೆಯಲ್ಲಿ ಆರೋಪಿಯೇ ಗರ್ಭಪಾತಗೊಂಡ ಭ್ರೂಣದ ಜೈವಿಕ ತಂದೆ ಎಂಬುದು ಸಾಬೀತಾಗಿತ್ತು. ಈ ಸಾಕ್ಷ್ಯಗಳನ್ನು ವಿಚಾರಣಾ ನ್ಯಾಯಾಲಯ ಸಮರ್ಪಕವಾಗಿ ಪರಿಗಣಿಸಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪೋಕ್ಸೋ ಕಾಯ್ದೆಯ ಸೆಕ್ಷನ್ 6 ಹಾಗೂ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಲಾಗಿದೆ. ಅಪಹರಣ ಆರೋಪಕ್ಕೆ ಹೆಚ್ಚುವರಿಯಾಗಿ ₹5 ಸಾವಿರ ದಂಡ ವಿಧಿಸಲಾಗಿದ್ದು, ಒಟ್ಟು ₹1.05 ಲಕ್ಷ ದಂಡದ ಪೈಕಿ ₹90 ಸಾವಿರವನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಆದೇಶಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *