Breaking News

ರೀಲ್ಸ್ ವಿಚಾರವಾಗಿ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ

ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ರೀಲ್ಸ್ ನೋಡುತ್ತಿದ್ದ ಪತ್ನಿಯನ್ನು ಪತಿ ಬಿಯರ್ ಬಾಟಲ್‌ನಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ರಾಘವೇಂದ್ರ ಮತ್ತು ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಸದಾ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದಾಳೆ ಎಂದು ರಾಘವೇಂದ್ರ ಆಕ್ಷೇಪಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿದಾಗ ಪತಿ ಬಿಯರ್ ಬಾಟಲ್‌ನಿಂದ ಶೃತಿಯ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಶೃತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಯ ಸಾವಿನ ಬಳಿಕ ರಾಘವೇಂದ್ರ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ದಂಪತಿಯ ಇಬ್ಬರು ಮಕ್ಕಳು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇದ್ದರು. ಘಟನಾ ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ದುಡುಕಿನ ನಿರ್ಧಾರದಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *