Breaking News

ರಾತ್ರಿ ಶುಂಠಿ ಬೆಳೆಗೆ ನೀರು ಹಾಯಿಸಲು ಹೋದವನ ಶವ ಪತ್ತೆ! ತನಿಖೆ ವೇಳೆ ಪತ್ನಿಯ ಹಖೀಖತ್ ಬಯಲು!

ಅರಸೀಕೆರೆ: ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮೋಹನ್ ಎಂಬಾತನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣವನ್ನು ಗಂಡಸಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಜಯಲಕ್ಷ್ಮಿ ಸೇರಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸೆ.4ರಂದು ರಾತ್ರಿ ಶುಂಠಿ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ಮೋಹನ್, ಜಮೀನಿನ ಸಮೀಪ ತಲೆಗೆ ಗಂಭೀರ ಗಾಯಗಳೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಈ ಕುರಿತು ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು. ವಿಚಾರಣೆ ವೇಳೆ ಜಯಲಕ್ಷ್ಮಿ, ಧನಂಜಯಮೂರ್ತಿ, ಜಗದೀಶ್ ಹಾಗೂ ಪುಟ್ಟರಾಜು ಸೇರಿ ಕೊಲೆಗೆ ಸಂಚು ರೂಪಿಸಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಜಗದೀಶ್ ಮೋಹನ್‌ರ ಗಮನ ಬೇರೆಡೆ ಸೆಳೆದಾಗ, ಪುಟ್ಟರಾಜು ಮತ್ತು ಧನಂಜಯಮೂರ್ತಿ ರಾಡ್‌ನಿಂದ ಹಲ್ಲೆ ನಡೆಸಿದ್ದು, ಬಳಿಕ ಜಗದೀಶ್ ಕೂಡ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *