ಬೆಂಗಳೂರು: ಮಾದಕ ವಸ್ತು ಮಾರಾಟ ಜಾಲದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎಂಡಿಎಂಎ, ಹೈಡ್ರೋ ಗಾಂಜಾ ಹಾಗೂ ಗಾಂಜಾ ಸೇರಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಗಿರಿನಗರ ಪೊಲೀಸರು ಐವರಿ ಕೋಸ್ಟ್ ಪ್ರಜೆ ಪೀಟರ್ ಅಲ್ಫ್ರೆಡ್‌ನನ್ನು ಬಂಧಿಸಿ 9.1 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ ಸುಮಾರು ₹18.26 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ. ಬಟ್ಟೆ ವ್ಯಾಪಾರದ ನೆಪದಲ್ಲಿ ದೆಹಲಿ ಮೂಲದ ಪೂರೈಕೆದಾರರಿಂದ ಡ್ರಗ್ಸ್ ಪಡೆದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇಂದಿರಾನಗರ ಪೊಲೀಸರು ಸಾಫ್ಟ್‌ವೇರ್ ಉದ್ಯೋಗಿ ನವೀನ್ ಹಾಗೂ ಆತನ ಸ್ನೇಹಿತನನ್ನು ಬಂಧಿಸಿ 2.1 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ. ಚಿಕ್ಕಜಾಲದಲ್ಲಿ 2.3 ಕೆಜಿ ಹೈಡ್ರೋ ಗಾಂಜಾ ಹಾಗೂ ಗೋವಿಂದಪುರದಲ್ಲಿ 10 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

