Breaking News

ಹಾಸನ: ಅರೇಹಳ್ಳಿಯಲ್ಲಿ ಸಾಲದ ವಿಚಾರಕ್ಕೆ ವ್ಯಕ್ತಿಯ ಕೊಲೆ

ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ ಸಾಲದ ಹಣ ಮರುಪಾವತಿ ವಿಚಾರಕ್ಕೆ ಅಹಮದ್ ಸಿದ್ದಿಕ್‌ ಎಂಬ ವ್ಯಕ್ತಿಯನ್ನು ಕತ್ತರಿಯಿಂದ ಇರಿದು ಕೊಲೆ ಮಾಡಲಾಗಿದೆ. ಸುಜಿತ್‌ ಎಂಬಾತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಸೆ.8ರಂದು ಹಣದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಬಳಿಕ ರೋಟರಿ ಕ್ಲಬ್‌ ಬಳಿ ನಡೆದುಕೊಂಡು ಹೋಗುತ್ತಿದ್ದ ಅಹಮದ್ ಸಿದ್ದಿಕ್‌ ಮೇಲೆ ಸುಜಿತ್‌ ಕತ್ತರಿಯಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಹಮದ್ ಸಿದ್ದಿಕ್‌ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂಬಂಧಿಕರ ದೂರಿನ ಮೇರೆಗೆ ಅರೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *