Breaking News

ಹಣಕ್ಕಾಗಿ ಅಳಿಯಂದ್ರ ಗಲಾಟೆ – ಕತ್ತರಿಯಿಂದ ಹಲ್ಲೆಗೈದು ಹತ್ಯೆ!

ಹಾಸನ: ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಹಣದ ವಹಿವಾಟಿಗೆ ಸಂಬಂಧಿಸಿದಂತೆ ಒಂದೇ ಕುಟುಂಬದ ಇಬ್ಬರು ಅಳಿಯಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. 33 ವರ್ಷದ ಮಹಮದ್ ಸಿದ್ದಿಕ್ ಕೊಲೆಯಾಗಿದ್ದು, 29 ವರ್ಷದ ಸುಜೀತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಿಕ್ ಅವರ ಪತ್ನಿ ರೇಷ್ಮಾ, ತಮ್ಮ ತಂಗಿ ದಿವ್ಯಾಳಿಗೆ ನೀಡಿದ್ದ ₹50 ಸಾವಿರ ಸಾಲವನ್ನು ವಾಪಸ್ ಕೇಳಿದ್ದರು. ಈ ವಿಚಾರವಾಗಿ ಸಿದ್ದಿಕ್ ಹಾಗೂ ದಿವ್ಯಾ ಪತಿ ಸುಜೀತ್ ನಡುವೆ ಜಗಳ ನಡೆದಿದ್ದು, ಆಕ್ರೋಶಗೊಂಡ ಸುಜೀತ್ ಕತ್ತರಿಯಿಂದ ಸಿದ್ದಿಕ್‌ಗೆ ಹಲವು ಬಾರಿ ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸಿದ್ದಿಕ್‌ಗೆ ಅರೇಹಳ್ಳಿ ಹಾಗೂ ಹಾಸನದಲ್ಲಿ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *