Breaking News

ವೃದ್ಧ ದಂಪತಿಯ ಚಿನ್ನ ದೋಚಿದ್ದ ಕೇರ್‌ ಟೇಕರ್‌ ಸೆರೆ

ಬೆಂಗಳೂರು: ವೃದ್ಧ ದಂಪತಿಯ ನಂಬಿಕೆ ಗಳಿಸಿ, ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಕೇರ್‌ಟೇಕರ್ ಸಮರ್ಥ ಪಾಟೀಲ್‌ನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 17 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನದ ಗಟ್ಟಿ ಜಪ್ತಿ ಮಾಡಲಾಗಿದೆ. ಕಳವು ಮಾಡಿದ ಚಿನ್ನಾಭರಣದಲ್ಲಿ ಕೆಲವನ್ನು ಕಲಬುರಗಿಯ ಎರಡು ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದಾನೆ. ಉಳಿದ ಚಿನ್ನಾಭರಣಗಳನ್ನು ಸ್ನೇಹಿತನಿಗೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೃದ್ಧ ದಂಪತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *