Breaking News

ಕೌಟುಂಬಿಕ ಕಲಹದ ಶಂಕೆ, ಬಾವಿಗೆ ಹಾರಿ ಮಹಿಳೆ ಸಾವು!

ಚಿಕ್ಕಬಳ್ಳಾಪುರ: ಕುಡುವತಿ ಗ್ರಾಮದಲ್ಲಿ ಕಲ್ಪನಾ (39) ಎಂಬ ಗೃಹಿಣಿ ಬಾವಿಗೆ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಳೆದ 20 ವರ್ಷಗಳ ಹಿಂದೆ ಮದುವೆಯಾಗಿದ್ದ ಕಲ್ಪನಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ತವರು ಮನೆಯಲ್ಲಿ ವಾಸವಿದ್ದರು. ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *