Breaking News

3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು: ಮಲತಾಯಿ ವಿರುದ್ಧ ಕೊಲೆ ಆರೋಪ, ಕುಟುಂಬಸ್ಥರಿಂದ ಹಲ್ಲೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಲಿಕ್ಷಿತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಮಗುವಿನ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಮಲತಾಯಿ ಗಿರಿಜಾ ವಿರುದ್ಧ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಲಿಕ್ಷಿತಾಳ ತಾಯಿ ಮೃತಪಟ್ಟ ಬಳಿಕ ತಂದೆ ಜಗದೀಶ್, ಗಿರಿಜಾ ಜೊತೆ ವಾಸವಾಗಿದ್ದರು. ಕಳೆದ 20 ದಿನಗಳಿಂದ ತೋಟದಗುಡ್ಡಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ. ಮಗುವಿನ ಸಾವಿನ ಬಳಿಕ ಕುಟುಂಬಸ್ಥರು ಗಿರಿಜಾ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಗಾಯದ ಗುರುತುಗಳ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಸಾವಿನ ನಿಖರ ಕಾರಣ ತನಿಖೆಯಿಂದ ತಿಳಿಯಬೇಕಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *